ಇದು ಭಾಗ್ಯ ಇದು ಭಾಗ್ಯ ಇದು ಭಾಗ್ಯವಯ್ಯ (ಶ್ರೀ ಪುರಂದರ ದಾಸರು)

ಇದು ಭಾಗ್ಯ ಇದು ಭಾಗ್ಯ ಇದು ಭಾಗ್ಯವಯ್ಯ || ಪ ||
ಪದುಮನಾಭನ ಪಾದ ಭಜನೆ ಸುಖವಯ್ಯ || ಅ.ಪ ||

ಕಲ್ಲಾಗಿ ಇರಬೇಕು ಕಠಿಣ ಭವತೊರೆಯೊಳಗೆ
ಬಿಲ್ಲಾಗಿ ಇರಬೇಕು ಬಲ್ಲವರೊಳಗೆ
ಮೆಲ್ಲನೇ ಮಾಧವನ ಮನದಿ ಮೆಚ್ಚಿಸಬೇಕು
ಬೆಲ್ಲವಾಗಿರಬೇಕು ಬಂಧುಜನರೊಳಗೆ || ೧ ||

ಬುದ್ಧಿಯಲಿ ತನುಮನವ ತಿದ್ದಿಕೊಳುತಿರಬೇಕು
ಮುದ್ದಾಗಿ ಇರಬೇಕು ಮುನಿಯೋಗಿಗಳಿಗೆ
ಮಧ್ವಮತಾಬ್ಧಿಯಲಿ ಮೀನಾಗಿ ಇರಬೇಕು
ಶುದ್ಧನಾಗಿರಬೇಕು ಕರಣತ್ರಯಂಗಳಲಿ || ೨ ||

ವಿಷಯಭೋಗದ ತೃಣಕೆ ಉರಿಯಾಗಿ ಇರಬೇಕು
ನಿಶಿ ಹಗಲು ಶ್ರೀಹರಿಯ ಭಜಿಸಬೇಕು
ವಸುಧೆಯೊಳು ಪುರಂದರವಿಠಲನ ನಾಮವ
ಹಸನಾಗಿ ನೆನೆನೆನೆದು ಸುಖಿಯಾಗಬೇಕು || ೩ ||

(ರಾಗ – ಕಾಂಭೋಜಿ, ಖಂಡಛಾಪುತಾಳ)

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s