ಇಂದು ಎನಗೆ ಗೋವಿಂದ (ಶ್ರೀ ರಾಘವೇಂದ್ರ ಸ್ವಾಮಿಗಳು)

- ಇಂದು ಎನಗೆ ಗೋವಿಂದ ನಿನ್ನಯ ಪಾದಾರ ವಿಂದವ ತೋರೋ ಮುಕುಂದನೇ -

ರಾಗ – ಭೈರವಿ        ತ್ರಿಪುಟತಾಳ

ಇಂದು ಎನಗೆ ಗೋವಿಂದ ನಿನ್ನಯ ಪಾದಾರ
ವಿಂದವ ತೋರೋ ಮುಕುಂದನೇ || ಪ ||

ಸುಂದರವದನನೇ ನಂದಗೋಪಿಯ ಕಂದ
ಮಂದರೋದ್ಧಾರ ಆನಂದ ಇಂದಿರೆರಮಣ || ಅ.ಪ ||

ನೊಂದೆನಯ್ಯ ಭವಬಂಧನದೊಳು ಸಿಲುಕಿ
ಮುಂದೆ ದಾರಿ ಕಾಣದೆ ಕುಂದಿದೆ ಜಗದೊಳು
ಕಂದನೆಂತೆಂದೆನ್ನ ಕುಂದುಗಳೆಣಿಸದೆ
ತಂದೆ ಕಾಯೋ ಕೃಷ್ಣ ಕಂದರ್ಪಜನಕನೇ || ೧ ||

ಮೂಢತನದಿ ಬಲು ಹೇಡಿಜೀವ ನಾನಾಗಿ
ದೃಢ ಭಕುತಿಯನ್ನು ಮಾಡಲಿಲ್ಲವೋ ಹರಿಯೆ
ನೋಡಲಿಲ್ಲವೋ ನಿನ್ನ ಪಾಡಲಿಲ್ಲವೋ ಮಹಿಮೆ
ಗಾಡಿಕಾರ ಕೃಷ್ಣ ಬೇಡಿಕೊಂಬೆನೋ ನಿನ್ನ || ೨ ||

ಧಾರುಣಿಯೊಳು ಬಲು ಭಾರ ಜೀವನನಾಗಿ
ದಾರಿತಪ್ಪಿ ನಡೆದೆ ಸೇರಿದೆ ಕುಜನರ
ಆರೋ ಕಾಯುವರಿಲ್ಲ ಸಾರಿದೆ ನಿನಗಯ್ಯ
ಧೀರ ವೇಣುಗೋಪಾಲ ಪಾರುಗಾಣಿಸೋ ಹರಿಯೇ || ೩ ||

– ಸ್ತೋತ್ರಸಂಗ್ರಹದ ಸಮಸ್ತ ವಾಚಕ ವೃಂದಕ್ಕೆ ೨೦೧೧ನೇಯ ಹೊಸ ವರ್ಷದ ಹಾರ್ದಿಕ ಶುಭಾಶಯಗಳು –

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s