ಮಳೆಯ ದಯಮಾಡೋ ರಂಗಯ್ಯ (ಹೆಳವನಕಟ್ಟೆ ಗಿರಿಯಮ್ಮ)

ಮಳೆಯ ದಯಮಾಡೊ ರಂಗಯ್ಯ ನಿಮ್ಮ
ಕರುಣ ತಪ್ಪಿದರೆ ಉಳಿಯದೀ ಲೋಕ || ಪ ||

ಪಶುಜಾತಿ ಹುಲ್ಲೆ ಸಾರಂಗ ಮೃಗಗಳು ಬಹಳ
ಹಸಿದು ಬಾಯಾರಿ ಬತ್ತಿದ ಕೆರೆಗೆ ಬಂದು
ತೃಷೆಯಡಗದೆ ತಲ್ಲಣಿಸಿ ಮೂರ್ಛೆಗೊಂಡು
ದೆಸೆ ದೆಸೆಗೆ ಬಾಯಿ ಬಿಡುತಿಹವಯ್ಯ ಹರಿಯೆ || ೧ ||

ಧಗೆಯಾಗಿ ದ್ರವಗುಂದಿ ಇರುವ ಬಾವಿಯ ನೀರ
ಮೊಗೆ ಮೊಗೆದು ಪಾತ್ರೆಯಲಿ ನಾರಿಯರು
ಹಗಲೆಲ್ಲ ತರುತಿಹರು ಯೋಚನೆಯ ಮಾಡುತ್ತ
ಬೇಗದಿಂದಲಿ ತರಿಸೊ ವೃಷ್ಟಿಯನು ಹರಿಯೆ || ೨ ||

ಸಂದು ಹೋದವು ಜ್ಯೇಷ್ಠ ಆಷಾಢ ಶ್ರಾವಣ
ಬಂದಿದೆ ಭಾದ್ರಪದ ಮಾಸವೀಗ
ಇಂದು ಪುರಂದರಗೆ ಹೇಳಿ ವೃಷ್ಟಿಯ ತರಿಸೊ
ಸಂದೇಹವಿನ್ಯಾಕೆ ಹೆಳವನಕಟ್ಟೆಯ ರಂಗ || ೩ ||

Advertisements

One thought on “ಮಳೆಯ ದಯಮಾಡೋ ರಂಗಯ್ಯ (ಹೆಳವನಕಟ್ಟೆ ಗಿರಿಯಮ್ಮ)

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s