ಸದಾ ಎನ್ನ ಹೃದಯದಲ್ಲಿ (ಶ್ರೀ ವಿಜಯದಾಸರು)

ರಾಗ – ಪಂತುವರಾಳಿ         ತಾಳ – ಆದಿ

ಸದಾ ಎನ್ನ ಹೃದಯದಲ್ಲಿ ವಾಸಮಾಡೋ ಶ್ರೀಹರಿ || ಪ ||
ನಾದ ಮೂರ್ತಿ ನಿನ್ನ ಪಾದ ಮೋದದಿಂದ ಭಜಿಸುವೆ || ಅ.ಪ ||

ಜ್ಞಾನವೆಂಬೊ ನವರತ್ನದ ಮಂಟಪದ ಮಧ್ಯದಲ್ಲಿ
ಗಾನಲೋಲನ ಕುಳ್ಳಿರಿಸಿ ಧ್ಯಾನದಿಂದ ಭಜಿಸುವೆ || ೧ ||

ಭಕ್ತಿರಸವೆಂಬ ಮುತ್ತು ಮಾಣಿಕ್ಯದ ಹರಿವಾಣದಿ
ಮುಕ್ತನಾಗಬೇಕುಯೆಂದು ಮುತ್ತಿನಾರತಿಯೆತ್ತುವೆ || ೨ ||

ನಿನ್ನನಾನು ಬಿಡುವನಲ್ಲ ಎನ್ನ ನೀನು ಬಿಡಲು ಸಲ್ಲ
ಘನ್ನ ಮಹಿಮ ವಿಜಯವಿಠಲ ಕೇಳೋ ನಿನ್ನ ಭಕ್ತರ ಸೊಲ್ಲ || ೩ ||

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s