ಕುಲ ಕುಲ ಕುಲವೆನ್ನುತಿಹರು (ಶ್ರೀ ಕನಕದಾಸರು)

ರಾಗ – ಮಧ್ಯಮಾವತಿ        ತಾಳ – ಝಂಪೆ

ಕುಲ ಕುಲ ಕುಲವೆನ್ನುತಿಹರು || ಪ ||
ಕುಲವ್ಯಾವುದು ಸತ್ಯಸುಖವುಳ್ಳ ಜನರಿಗೆ || ಅ.ಪ ||

ಕೆಸರೊಳು ತಾವರೆ ಪುಟ್ಟಲು ಅದ ತಂದು
ಬಿಸಜನಾಭನಿಗರ್ಪಿಸಲಿಲ್ಲವೆ
ಹಸುವಿನ ಮಾಂಸದೊಳುತ್ಪತ್ತಿ ಕ್ಷೀರವು
ವಸುಧೆಯೊಳಗೆ ಭೂಸುರರುಣ್ಣಲಿಲ್ಲವೆ || ೧ ||

ಮೃಗಗಳ ಮೈಯಲ್ಲಿ ಪುಟ್ಟಿದ ಕಸ್ತೂರಿ
ತೆಗೆದು ಪೂಸುವರು ಭೂಸುರರೆಲ್ಲರು
ಬಗೆಯಿಂದ ನಾರಾಯಣನ್ಯಾವ ಕುಲದವ
ಅಗಜಾವಲ್ಲಭನ್ಯಾತರ ಕುಲದವನು || ೨ ||

ಆತ್ಮ ಯಾವ ಕುಲ ಜೀವ ಯಾವ ಕುಲ
ತತ್ತ್ವೇಂದ್ರಿಯಗಳ ಕುಲ ಪೇಳಿರಯ್ಯ
ಆತ್ಮಾಂತರಾತ್ಮ ನೆಲೆಯಾದಿಕೇಶವ
ಆತನೊಲಿದ ಮೇಲೆ ಯಾತರ ಕುಲವಯ್ಯಾ || ೩ ||

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s