ಕುಲ ಕುಲ ಕುಲವೆಂದು ಹೊಡೆದಾಡದಿರಿ (ಶ್ರೀ ಕನಕದಾಸರು)

ರಾಗ – ಪಂತುವಳಿ         ತಾಳ – ಅಟ್ಟ

ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ
ಕುಲದ ನೆಲೆಯನೇನಾದರು ಬಲ್ಲಿರ || ಪ ||

ಹುಟ್ಟಿದ ಯೋನಿಗಳಿಲ್ಲ ಮೆಟ್ಟಿದ ಭೂಮಿಗಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲ
ಗುಟ್ಟು ಕಾಣಿಸೆ ಬಂತು ಹಿರಿದೇನು ಕಿರಿದೇನು
ನೆಟ್ಟನೆ ಸರ್ವಜ್ಞನ ನೆನೆಕಂಡ್ಯ ಮನುಜ || ೧ ||

ಜಲವೆ ಸಕಲ ಕುಲಕೆ ತಾಯಲ್ಲವೆ
ಜಲದ ಕುಲವನೇನಾದರು ಬಲ್ಲಿರ
ಜಲದ ಬೊಬ್ಬುಳಿಯಂತೆ ಸ್ಥಿರವಲ್ಲವೀ ದೇಹ
ನೆಲೆಯನರಿತು ನೀ ನೆನೆಕಂಡ್ಯ ಮನುಜ || ೨ ||

ಹರಿಯೆ ಸರ್ವೋತ್ತಮ ಹರಿಯೇ ಸರ್ವೇಶ್ವರ
ಹರಿಮಯವೆಲ್ಲವೆನುತ ತಿಳಿದು
ಸಿರಿ ಕಾಗಿನೆಲೆಯಾದಿಕೇಶವರಾಯನ
ಚರಣಕಮಲವ ಕೀರ್ತಿಸುವನೆ ಕುಲಜ || ೩ ||

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s