ನಮ್ಮಮ್ಮ ಶಾರದೆ ಉಮಾಮಹೇಶ್ವರಿ (ಶ್ರೀ ಕನಕದಾಸರು)

ರಾಗ: ಮೋಹನ  ತಾಳ: ಆಟ

ನಮ್ಮಮ್ಮ ಶಾರದೆ ಉಮಾಮಹೇಶ್ವರಿ ನಿಮ್ಮೊಳಗಿಹನ್ಯಾರಮ್ಮ || ಪ ||
ಕಮ್ಮಗೋಲನ ವೈರಿಸುತನಾದ ಸೊಂಡಿಲ ಹೆಮ್ಮೆಯ ಗಣನಾಥನೆ || ಅ.ಪ ||

ಮೋರೆಕಪ್ಪಿನ ಭಾವ ಮೊರದಗಲ ಕಿವಿ ಕೋರೆದಾಡೆಯವನ್ಯಾರಮ್ಮ
ಮೂರು ಕಣ್ಣಿನ ಸುತ ಮುರಿದಿಟ್ಟ ಚಂದ್ರನ
ಧೀರ ಗಣನಾಥನೆ ಅಮ್ಮಯ್ಯ || ೧ ||

ಉಟ್ಟದಟ್ಟಿಯು ಬಿಗಿದುಟ್ಟ ಚಲ್ಲಣದ ದಿಟ್ಟ ತಾನಿವನ್ಯಾರಮ್ಮ
ಶಿವನ ಪಟ್ಟದ ರಾಣಿ ಪಾರ್ವತಿಯ ಕುಮಾರನು
ಹೊಟ್ಟೆಯ ಗಣನಾಥನೆ ಅಮ್ಮಯ್ಯ || ೨ ||

ರಾಶಿ ವಿದ್ಯೆಯ ಬಲ್ಲ ರಮಣಿ ಹಂಬಲನೊಲ್ಲ ಭಾಷಿಗನಿವನ್ಯಾರಮ್ಮ
ಲೇಸಾಗಿ ಸುಜನರ ಸಲಹುವ ನೆಲೆಯಾದಿ ಕೇಶವನ ದಾಸ ಕಾಣೆ ಅಮ್ಮಯ್ಯ || ೩ ||

Advertisements

One thought on “ನಮ್ಮಮ್ಮ ಶಾರದೆ ಉಮಾಮಹೇಶ್ವರಿ (ಶ್ರೀ ಕನಕದಾಸರು)

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s