ವಂದಿಸುವುದಾದಿಯಲಿ ಗಣನಾಥನ (ಶ್ರೀ ಪುರಂದರ ದಾಸರು)

ರಾಗ: ನಾಟ  ತಾಳ: ಆಟ

ವಂದಿಸುವುದಾದಿಯಲಿ ಗಣನಾಥನ || ಪ ||
ಸಂದೇಹಸಲ್ಲ ಶ್ರೀಹರಿಯಾಜ್ಞೆಯಿದಕುಂಟು || ಅ.ಪ ||

ಹಿಂದೆ ರಾವಣ ತಾನು ವಂದಿಸದೆ ಗಜಮುಖನ
ನಿಂದು ತಪವನು ಗೈದು ವರ ಪಡೆಯಲು
ಒಂದು ನಿಮಿಷದಿ ಬಂದು ವಿಘ್ನವನು ಆಚರಿಸಿ
ತಂದ ವರಗಳನೆಲ್ಲ ಧರೆಗೆ ಇಳಿಸಿದನು || ೧ ||

ಅಂದಿನಾ ಬಗೆಯರಿತು ಬಂದು ಹರಿ ಧರ್ಮಜಗೆ
ಮುಂದೆ ಗಣಪನ ಪೂಜಿಸೆಂದು ಪೇಳೆ
ಒಂದೆ ಮನದಲಿ ಬಂದು ಪೂಜಿಸಲು ಗಣನಾಥ
ಹೊಂದಿಸಿದ ನಿರ್ವಿಘ್ನದಿಂದ ರಾಜ್ಯವನು || ೨ ||

ಇಂದು ಜಗವೆಲ್ಲ ಉಮೆನಂದನನ ಪೂಜಿಸಲು
ಚೆಂದದಿಂದಲಿ ಸಕಲ ಸಿದ್ಧಿಗಳನಿತ್ತು
ತಂದೆ ಸಿರಿ ಪುರಂದರವಿಟ್ಠಲನ ಸೇವೆಯೊಳು
ಬಂದ ವಿಘ್ನ ಕಳೆದಾನಂದವನು ಕೊಡುವ || ೩ ||

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s