ವಾದಿರಾಜ ಮುನಿಪಾ ಹಯಮುಖ (ಶ್ರೀ ಗೋಪಾಲದಾಸರು)

ರಾಗ: ಖರಹರಪ್ರಿಯ            ತಾಳ: ಆದಿ

ವಾದಿರಾಜ ಮುನಿಪಾ ಹಯಮುಖ
ಪಾದಕಮಲ ಮಧುಪಾ || ಪ ||

ನೀ  ದಯದಲಿ ತವ ಪಾದ ಧ್ಯಾನವನು
ಆದರದಲಿ ಕೊಟ್ಟಾದರಿಸೆನ್ನನು || ಅ.ಪ ||

ಮೂಷಕ ಬಿಲದಿಂದ ಉದರಪೋಷಕ ಬರಲಂದು
ವಾಸುಕಿ ಭಯದಿ ನಿಮ್ಮಾಸನದೆಡೆ ಬರೆ
ಕ್ಲೇಶ ಕಳೆದು ಸಂತೋಷಗೈಸಿದೆ || ೧ ||

ಮುಂದೆ ಭೂತನರನಾ ಪ್ರೇರಿಸಿ ಹಿಂದೆ-ವೊಬ್ಬ ನರನಾ
ನಿಂದಿರಿಸಿದೆ ಆನಂದದಿಂದ ಜನ
ವೃಂದ ನೋಡುತಿರೆ ಅಂದಣ ನಡಿಸಿದ್ಯೋ || ೨ ||

ಕ್ಷಿತಿಯೊಳು ಸತಿ ತನ್ನಾ ವಲ್ಲಭ
ಮೃತಿಯೈದಿರೆ ಮುನ್ನಾ
ಅತಿಶೋಕದಿ ಬಂದು ನುತಿಸಲು ಆ
ಪತಿಯನು ಬದುಕಿಸಿ ಹಿತದಿ ರಕ್ಷಿಸಿದೆ || ೩ ||

ನರಪತಿ ವ್ಯಾಧಿಯಲಿ ಬಳಲ್ವದ
ತ್ವರಿತದಿ ನೀ ಕೇಳಿ
ಹರುಷದಿ ವ್ಯಾಧಿಯ ಪರಿಹರಿಸ್ಯವನಿಗೆ
ಹರುಷದಿಂದಲಭಯದ ತೋರಿದೆ || ೪ ||

ಶಾಸ್ತ್ರ್ ಪ್ರಸಂಗದಲಿ ನಾರಾಯಣ ಭೂತರ ಗೆಲಿದಲ್ಲೆ
ಖ್ಯಾತಿಯಿಂದ ಬಹು ಮಾತನಾಡಿ ಶ್ರೀ
ನಾಥನ ಮಂದಿರ ಪ್ರೀತಿಲಿ ತರಿಸಿದ್ಯೋ || ೫ ||

ತುರಗವದನ ಪಾದಾ ಭುಜಗಳಲಿ
ಧರಿಸಿಕೊಂಡು ಮೋದ ಕಡಲೆ ಮಡ್ಡಿಯನು
ಕರದಿಂದುಣಿಸಿದ ಗುರುವರ ಶೇಖರ || ೬ ||

ಆ ಮಹಾ ಗೋಪಾಲವಿಠ್ಠಲ ತಾಮರಸದಳಗಳ
ಧೀಮಂತರಿಗೆ ಸುಕಾಮಿತವನುಕೊಡುವ
ಆ ಮಹಾಮಹಿಮ || ೭ ||

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s